ಮಂಗಳೂರು: ನಗರದ ತೋಟ ಬೆಂಗ್ರೆಯಲ್ಲಿ ಹೆತ್ತವರೊಂದಿಗೆ ವಾಸವಾಗಿದ್ದ ಮದುವೆ ನಿಶ್ಚಯವಾಗಿದ್ದ ಯುವತಿ ಮನೆಯಿಂದ ನಾಪತ್ತೆಯಾಗಿರುವ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪವಿತ್ರಾ ಖಾರ್ವಿ (25) ನಾಪತ್ತೆಯಾದವರು. ಎ.25ರಂದು ಮಧ್ಯಾಹ್ನ ವೇಳೆ ಮನೆಯವರು ಊಟ ಮಾಡಿ ಮಲಗಿದ್ದರು.3.30ರ ವೇಳೆಗೆ ಎಚ್ಚರವಾಗಿ ನೋಡಿದಾಗ ಪವಿತ್ರಾ ಮನೆಯಲ್ಲಿ ಇರಲಿಲ್ಲ. ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಮೇ 3ರಂದು ಮದುವೆಗೆ ದಿನಾಂಕ ನಿಗದಿಯಾಗಿತ್ತು. ಈಕೆಯ ಬಗ್ಗೆ ಮಾಹಿತಿ ಇದ್ದಲ್ಲಿ ಪಣಂಬೂರು ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

