Breaking News

ಹರಿಯಾಣದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌: ಇಬ್ಬರು ಸಜೀವ ದಹನ

ಹರಿಯಾಣದಲ್ಲಿ ಖಾಸಗಿ ಬಸ್‌ವೊಂದು ಹೊತ್ತಿ ಉರಿದಿದ್ದು, ಇಬ್ಬರು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಭಿವಾನಿ-ಹನ್ಸಿ ರಸ್ತೆಯಲ್ಲಿ ತೆರಳುತ್ತಿದ್ದ ಖಾಸಗಿ ಬಸ್‌ಗೆ ಮಿಲ್ಕ್‌ಪುರ ಗ್ರಾಮದ ಬಳಿ ಏಕಾಏಕಿ ಬೆಂಕಿ ಹೊತ್ತಿದೆ.ಈ ಅಪಘಾತದಲ್ಲಿ ಆರು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಭಿವಾನಿಯಿಂದ ಹನ್ಸಿ ಕಡೆಗೆ ಬಸ್‌ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಯಾವ ಕಾರಣದಿಂದ ಬಸ್‌ಗೆ ಬೆಂಕಿ ಹೊತ್ತಿದೆ ಎಂದು ತಿಳಿದುಬಂದಿಲ್ಲ. ಹೆಚ್ಚಿನ ಪ್ರಯಾಣಿಕರು ಬೆಂಕಿ ಹೊತ್ತಿದ ತಕ್ಷಣವೇ ಕಿಟಕಿ ಹಾಗೂ ಬಾಗಿಲುಗಳಿಂದ ಕೆಳಕ್ಕೆ ಇಳಿದಿದ್ದಾರೆ. ಸುಟ್ಟಗಾಯಗಳಿಂದ ಹಾಗೂ ಉಸಿರು ಕಟ್ಟಿ ಇಬ್ಬರು ಮೃತಪಟ್ಟಿದ್ದಾರೆ.
ಬೆಂಕಿ ಕಾಣಿಸಿದಾಗ ಮಧ್ಯರಾತ್ರಿಯಾಗಿದ್ದು, ಸುತ್ತಮುತ್ತ ಓಡಾಡುತ್ತಿದ್ದ ಜನ ಸಹಾಯಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಹನ್ಸಿ ಸಿವಿಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *