Breaking News

ಬಾಗಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಣೆ ಪತ್ತೆ ; ವಾಹನ ಸಮೇತ ವಶಕ್ಕೆ

ಬಾಗಲಕೋಟೆ ನಗರದಲ್ಲಿ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಪತ್ತೆ ಹಚ್ಚಿ, ವಾಹನ ಸಮೇತ ವಶಕ್ಕೆ ಪಡೆದ ಘಟನೆ ನಡೆದಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ ಈ ಅಕ್ರಮ ಚಟುವಟಿಕೆ ಬೆಳಕಿಗೆ ಬಂದಿದೆ. ಬಾಗಲಕೋಟೆ ತಹಶೀಲ್ದಾರರ ನಿರ್ದೇಶನದ ಮೇರೆಗೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಸಂಯುಕ್ತವಾಗಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಆಹಾರ ಶಿರಸ್ತೆದಾರ ಪ್ರಕಾಶ ಷೇರಖಾನೆ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದು, ಪರಿಶೀಲನೆಯ ಸಂದರ್ಭದಲ್ಲಿ ಪಡಿತರ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಾಗಣೆ ಮಾಡಲಾಗುತ್ತಿರುವುದು ದೃಢಪಟ್ಟಿದೆ. ಅಕ್ರಮ ಸಾಗಣೆ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ವಾಹನವನ್ನು ಜಪ್ತಿ ಮಾಡಿ, ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಕಾರ್ಯಾಚರಣೆಯಿಂದಾಗಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗಲಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *