Breaking News

ಆಂಧ್ರ ವ್ಯಕ್ತಿ ಬಂಧನ; 8 ಕೆ.ಜಿ ಗಾಂಜಾ ವಶ

ಕೋಲಾರ: ಮುಳಬಾಗಿಲು ನಗರದ ಹೊರವಲಯದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಸುಮಾರು 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪುಂಗನೂರು ಪಟ್ಟಣದ ನಿವಾಸಿ ಆವುಲ ರವಿ (27) ಬಂಧಿತ ಆರೋಪಿ. ಮುಳಬಾಗಿಲು ಡಿವೈಎಸ್ಪಿ ಮನೀಷಾ ಹಾಗೂ ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ, ಚೆನ್ನೈ ರಸ್ತೆಯ ಕಾಲೇಶ ದರ್ಗಾ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಸುಳಿವು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣವೇ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್‌ ಮಾರ್ಗದರ್ಶದಲ್ಲಿ ಮನೀಷಾ ನೇತೃತ್ವದಲ್ಲಿ ಅಪರಾಧ ವಿಭಾಗದ ಹೆಡ್‌ ಕಾನ್‌ಸ್ಟೆಬಲ್‌ ಆನಂದಕುಮಾರ್, ನಾಗರಾಜು, ನಾರಾಯಣಸ್ವಾಮಿ, ಸಂತೋಷ್‌ಕುಮಾರ್ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *