Breaking News

ಒಂದೇ ದ್ವಿಚಕ್ರ ವಾಹನದಲ್ಲಿ 6 ಮಕ್ಕಳ ಸಂಚಾರ ಫೊಟೋ ವೈರಲ್: ಮಾಲಕನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ನಗರದ ಪಾದರಾಯನಪುರದ ಗೋರಿಪಾಳ್ಯ ಬಳಿ ಒಂದೇ ದ್ವಿಚಕ್ರ ವಾಹನದಲ್ಲಿ ಆರು ಮಂದಿ ಮಕ್ಕಳು ಕುಳಿತುಕೊಂಡು ಚಾಲನೆ ಮಾಡುವ ರೀತಿಯಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಮಾಗಡಿ ರಸ್ತೆ ಸಂಚಾರ ಠಾಣೆಯ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರ ಅಧಿಕೃತ ಎಕ್ಸ್ ಖಾತೆಗೆ ಶ್ರೇಯಸ್ ಶೇಯು ಹೆಸರಿನ ಖಾತೆಯಿಂದ ಫೋಟೋ ಟ್ಯಾಗ್ ಮಾಡಲಾಗಿತ್ತು. ಎಪ್ರಿಲ್ 26ರಂದು ಬೆಳಗ್ಗೆ 10:45ರ ಸುಮಾರಿಗೆ ಪಾದರಾಯನಪುರ ಮುಖ್ಯರಸ್ತೆಯ ಗೋರಿಪಾಳ್ಯದ ಬಳಿ ದ್ವಿಚಕ್ರ ವಾಹನದಲ್ಲಿ ಆರು ಮಕ್ಕಳು ಕುಳಿತುಕೊಂಡು ಚಾಲನೆ ಮಾಡುತ್ತಿದ್ದಾರೆ. ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿತ್ತು. ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡ ಮಾಗಡಿ ರಸ್ತೆ ಸಂಚಾರ ಪೊಲೀಸರು ನೋಂದಣಿ ಸಂಖ್ಯೆ ಆಧರಿಸಿ ಪರಿಶೀಲಿಸಿದಾಗ ಮಾಲಕ ಅಜ್ವರ್ ಪಾಷಾ ಬಾಪೂಜಿ ನಗರದ ನಿವಾಸಿ ಎಂದು ಗೊತ್ತಾಗಿದೆ. ವಿಳಾಸ ಆಧರಿಸಿ ಮನೆ ಬಳಿ ಹೋದಾಗ ಮನೆ ಇಲ್ಲದಿರುವುದು ತಿಳಿದುಬಂದಿದೆ. ವೈರಲ್ ಆಗುತ್ತಿರುವ ಪೋಸ್ಟ್‌ ನಲ್ಲಿ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿರುವ ಬಗ್ಗೆ ಎಲ್ಲಿಯೂ ವಿಡಿಯೋ ದೊರೆತಿಲ್ಲ. ಮಕ್ಕಳನ್ನು ವಾಹನದಲ್ಲಿ ಕೂರಿಸಿಕೊಂಡು ಫೋಟೋ ಸೆರೆಹಿಡಿಯಲು ಈ ರೀತಿ ಮಾಡಿರಬಹುದಾ? ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದೆ. ಸದ್ಯ ಮಾಲಕರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *