Breaking News

ವೇಶ್ಯವಾಟಿಕೆ ದಂಧೆಯ ಮೇಲೆ ಪೊಲೀಸ್ ದಾಳಿ; 11 ಮಂದಿಯ ಬಂಧನ

ಮಾನ್ವಿ: ತಾಲೂಕಿನ ಹಿರೇಕೋಟ್ನೆಕಲ್-ಬ್ಯಾಗವಾಟ್ ರಸ್ತೆಯ ಕೆನಾಲ್ ಸಮೀಪದ ಹೊಲ ಪ್ರದೇಶದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ, 11 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಜಾಲದ ಕಿಂಗ್‌ಪಿನ್ ಎಂದು ಗುರುತಿಸಲಾದ ಮಾನ್ವಿ ಇಂದಿರಾನಗರ ನಿವಾಸಿ ತಾಯಪ್ಪ ಸೇರಿದಂತೆ ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳು ಕೆಲಸದ ಹುಡುಕಾಟದಲ್ಲಿದ್ದ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರನ್ನು ಸಂಪರ್ಕಿಸಿ, ಹೆಚ್ಚಿನ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬಳಿಕ ವೇಶ್ಯಾವಾಟಿಕೆಗೆ ದೂಡುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಶನಿವಾರ ರಾತ್ರಿ ದಾಳಿ ನಡೆಸಿದ ಪೊಲೀಸರು ಅಕ್ರಮ ಚಟುವಟಿಕೆಯನ್ನು ಭೇದಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಂಧನೂರು ಡಿಎಸ್ಪಿ ಚಂದ್ರಶೇಖರ್ ನಾಯಕ್ ನೇತೃತ್ವ ವಹಿಸಿದ್ದರು. ಮಾನ್ವಿ ಪೊಲೀಸ್ ಠಾಣೆಯ ಪಿಐ ಸೋಮಶೇಖರ ಎಸ್. ಕೆಂಚರೆಡ್ಡಿ, ಪಿಎಸ್‌ಐ ಅಜ್ಮೀರ್, ಎಎಸ್‌ಐ ಹನುಮೇಶ್ ಹಾಗೂ ಸಿಬ್ಬಂದಿ ಹುಸೇನ್ ಸಾಬ್, ಬಸನಗೌಡ, ಸೂಗಪ್ಪ, ಚರಣ, ಪ್ರಕಾಶ್ ಸೇರಿದಂತೆ ಕ್ರೈಂ ಬ್ರಾಂಚ್ ತಂಡ ಪಾಲ್ಗೊಂಡಿತ್ತು. ದಾಳಿ ವೇಳೆ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *