Breaking News

ಲಂಚ ಪಡೆಯುವ ವೇಳೆ ಆರ್‌ಟಿಒ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಕೊಪ್ಪಳ: ಶೋರೂಮ್ ಟ್ರೇಡ್ ಲೈಸನ್ಸ್ ನೀಡಲು ಲಂಚ ಬೇಡಿಕೆಯಿಟ್ಟಿದ್ದ ಆರ್‌ಟಿಒ ಕಚೇರಿಯ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಧಿಸಿರುವ ಘಟನೆ ನಡೆದಿದೆ. ಕೊಪ್ಪಳ ಆರ್‌ಟಿಒ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಎಸ್‌ಡಿಎ ರಂಜಿತ್ ಎಂಬಾತನು ಲೈಸನ್ಸ್ ನೀಡಲು 21 ಸಾವಿರ ಲಂಚ ಕೇಳಿದ್ದನು. ಈ ಸಂಬಂಧ ನಯೀಮ್ ಎಂಬವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರು ಆಧರಿಸಿ ಲೋಕಾಯುಕ್ತರು ಕಾರ್ಯಾಚರಣೆ ನಡೆಸಿ, ನಯೀಮ್ ಅವರು ಹಣ ನೀಡುವ ವೇಳೆ ರಂಜಿತ್‌ನನ್ನು ಬಂಧಿಸಿದ್ದಾರೆ. ಶೋರೂಮ್ ಆರಂಭಿಸಲು ನಯೀಮ್ ಅವರು ಮೂರು ತಿಂಗಳ ಹಿಂದೆ ಅರ್ಜಿ ಸಲ್ಲಿಸಿದ್ದರೂ, ಲೈಸನ್ಸ್ ನೀಡಲು ವಿಳಂಬ ಮಾಡುತ್ತಾ ಲಂಚಕ್ಕೆ ಒತ್ತಾಯ ಮಾಡಲಾಗುತ್ತಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ನಡೆಸಲಾಗಿದೆ. ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ದೂರುದಾರರು ಕುಷ್ಟಗಿ, ಕಾರಟಗಿ ಮತ್ತು ಹುಲಿಗಿ ಪ್ರದೇಶಗಳಲ್ಲಿ ಶೋರೂಮ್ ತೆರೆಯಲು ಪರವಾನಿಗೆಗೆ ಅರ್ಜಿ ಸಲ್ಲಿಸಿರುವ ಮಾಹಿತಿ ತಿಳಿದು ಬಂದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *