Breaking News

ಕಾರಿಗೆ ನಕಲಿ ನಂಬರ್: ಚಾಲಕನ ವಿರುದ್ಧ ಪ್ರಕರಣ

ಪುತ್ತೂರು: ಮೋಸ ಮಾಡುವ ಉದ್ದೇಶದಿಂದ ನಕಲಿ ನೋಂದಣಿ ಸಂಖ್ಯೆ ಅಳವಡಿಸಿಕೊಂಡು ಬಳಕೆ ಮಾಡುತ್ತಿದ್ದ ಕಾರೊಂದನ್ನು ನಗರ ಠಾಣೆಯ ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದು ಆರೋಪಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಗರದ ಹೊರವಲಯದ ಕೂರ್ನಡ್ಕ ನಿವಾಸಿ ಹಬೀಬ್ ಆರೋಪಿ. ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಕೆಮ್ಮಿಂಜೆ ಗ್ರಾಮದ ಕೂರ್ನಡ್ಕ ಸಮೀಪದ ಸಂಜಯನಗರ ಬಳಿ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಾಗ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದ. ಅನುಮಾನಗೊಂಡ ಪೊಲೀಸರು ನಂಬರ್ ಪ್ಲೇಟ್, ಎಂಜಿನ್ ನಂಬರ್, ಚೇಸೀಸ್ ನಂಬರ್ ಪರಿಶೀಲಿಸಿದಾಗ ಕಾರಿನ ನೋಂದಣಿ ನಂಬರ್, ಎಂಜಿನ್ ನಂಬರ್, ಚೇಸೀಸ್ ನಂಬರ್‌ಗೆ ವ್ಯತ್ಯಾಸ ಇರುವುದು ಕಂಡುಬಂದಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *