Breaking News

ಉಡುಪಿ | ಕಾಲೇಜು ವಿದ್ಯಾರ್ಥಿಗಳಿದ್ದ ಬಸ್‌ ಟ್ಯಾಂಕರ್‌ಗೆ ಡಿಕ್ಕಿ: ಮೂವರ ಸಾವು

ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಕುಂದಾಪುರ ವ್ಯಾಪ್ತಿಯ ತ್ರಾಸಿಯ ಮರವಂತೆ ಬೀಚ್ ಬಳಿ ಬುಧವಾರ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ರಂಭಾಪುರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳು ಎರಡು ದಿನಗಳ ಹಿಂದೆ ಪ್ರವಾಸಕ್ಕೆ ಹೊರಟಿದ್ದು, ಬಸ್ಸಿನಲ್ಲಿ ಒಟ್ಟು 50 ಮಂದಿ ಇದ್ದರು ಎಂದು ಮೂಲಗಳು ತಿಳಿಸಿವೆ. ವಿದ್ಯಾರ್ಥಿಗಳು ಮುರ್ಡೇಶ್ವರಕ್ಕೆ ತೆರಳಿ, ಅಲ್ಲಿಂದ ಬಸ್‌ನಲ್ಲಿ ಉಡುಪಿ ಕಡೆಗೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ರಸ್ತೆ ಬದಿ ನಿಲ್ಲಿಸಿದ ಗ್ಯಾಸ್ ಟ್ಯಾಂಕರ್‌ಗೆ ಢಿಕ್ಕಿ ಹೊಡೆದಿದೆ. ಬಳಿಕ ಪಕ್ಕದಲ್ಲಿದ್ದ ಗೂಡ್ಸ್ ಲಾರಿಗೂ ಢಿಕ್ಕಿ ಹೊಡೆದಿದೆ ಎಂದು ಹೇಳಿವೆ. ಬಸ್‌ ಚಾಲಕ, ಸಹಾಯಕ ಹಾಗೂ ಕ್ಲೀನರ್ ಮೃತಪಟ್ಟಿದ್ದಾರೆ. ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದಿವೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *