Breaking News

ಯುವಕನ ಕೊಲೆ: ಆರೋಪಿ ಬಂಧನ

ಕಾಸರಗೋಡು: ಸೀತಾಂಗೋಳಿಯ ಮೇಲಿನ ಪೇಟೆಯ ಕಟ್ಟಡವೊಂದರಲ್ಲಿ ಬಾಪಾಲಿಪೊನ ಕುಂಟಿಕಾ ನಿವಾಸಿ ಶಫಾಯತ್ (35) ಎಂಬುವರನ್ನು ಕೊಲೆ ಮಾಡಿದ ಆರೋಪದಲ್ಲಿ ಕುಂಬಳೆ ಬಳಿಯ ನಾಯ್ಕಾಪು ಕೋಟೆಕಾರು ನಿವಾಸಿ ಶ್ರೀನಿವಾಸ (39) ಎಂಬಾತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಶಫಾಯತ್ ಅವರ ಶವ ಕಟ್ಟಡದ ಹಿಂಬದಿ ಬಿದ್ದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಲೆಗೆ ಗಂಭೀರ ಏಟು ತಗುಲಿರುವುದು ಕಂಡುಬಂದಿದೆ. ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಶ್ರೀನಿವಾಸ ಮತ್ತು ಶಫಾಯತ್ ನಡುವೆ ಮಾತಿನ ಚಕಮಕಿ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರಿಗೆ ಪತ್ನಿ, 4 ಮಕ್ಕಳು ಇದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *