Breaking News

ಕೃಷಿ ಅಧಿಕಾರಿಗಳ ಭರ್ಜರಿ ದಾಳಿ! ಚಿಕ್ಕಮಗಳೂರಿನಲ್ಲಿ ಅಕ್ರಮ ಯೂರಿಯಾ ದಾಸ್ತಾನು ಪತ್ತೆ!

ಚಿಕ್ಕಮಗಳೂರು: ಒಂದೆಡೆ ಜಿಲ್ಲೆಯ ರೈತರು ಕೃಷಿ ಚಟುವಟಿಕೆಗಳಿಗೆ ಸಕಾಲಕ್ಕೆ ಯೂರಿಯಾ ಗೊಬ್ಬರ ಸಿಗದೆ ಪರದಾಡುತ್ತಿದ್ದರೆ, ಮತ್ತೊಂದೆಡೆ ಮಧ್ಯವರ್ತಿಗಳು ಕೃಷಿ ಬಳಕೆಯ ರಸಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿ ದುರುಪಯೋಗಪಡಿಸಿಕೊಳ್ಳುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.ತಾಲೂಕಿನ ಕೆಸವಿನಮನೆ ಗ್ರಾಮದಲ್ಲಿರುವ ಕೋಳಿ ಫಾರಂ ಒಂದರ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಇಂದು ಮಿಂಚಿನ ದಾಳಿ ನಡೆಸಿದ್ದಾರೆ. ಕೃಷಿ ಉದ್ದೇಶದ ಯೂರಿಯಾವನ್ನು ಅಕ್ರಮವಾಗಿ ಸಂಗ್ರಹಿಸಿ, ಅದನ್ನು ಕೈಗಾರಿಕಾ ಉದ್ದೇಶಗಳಿಗಾಗಿ ರೀ-ಪ್ಯಾಕಿಂಗ್ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಕೃಷಿ ಇಲಾಖೆ ಅಧಿಕಾರಿ ತಿರುಮಲೇಶ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಈ ವೇಳೆ ಒಟ್ಟು 399 ಚೀಲ ಯೂರಿಯಾವನ್ನು ಸೀಜ್ ಮಾಡಲಾಗಿದೆ. ಇದರಲ್ಲಿ 181 ಮೂಲ ಯೂರಿಯಾ ಚೀಲಗಳು ಹಾಗೂ ಅಕ್ರಮವಾಗಿ ರೀ-ಪ್ಯಾಕ್ ಮಾಡಲಾಗಿದ್ದ 218 ಚೀಲಗಳು ಸೇರಿವೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೋಳಿ ಫಾರಂ ಮಾಲೀಕ ರಾಜೇಶ್ ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *