Breaking News

ಧಾರವಾಡದಲ್ಲಿ ಟಿಬೆಟಿಯನ್ ವ್ಯಕ್ತಿಯ ಬರ್ಬರ ಹತ್ಯೆ..!

ವಿದ್ಯಾಕಾಶಿ ಧಾರವಾಡದ ಹೊರವಲಯದಲ್ಲಿ ಟಿಬೆಟಿಯನ್ ಮೂಲದ ವ್ಯಕ್ತಿಯೊಬ್ಬರ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಹಳಿಯಾಳ ರಸ್ತೆಯ ಪಕ್ಕದಲ್ಲಿ ಪತ್ತೆಯಾದ ಶವ ಮೊದಲು ರಸ್ತೆ ಅಪಘಾತವೆಂದು ತೋರಿಬಂದರೂ, ಪೊಲೀಸರ ಚಾಣಾಕ್ಷ ತನಿಖೆಯಿಂದ ಇದು ಪಕ್ಕಾ ಪ್ಲಾನ್ಡ್ ಮರ್ಡರ್ ಎಂಬುದು ದೃಢಪಟ್ಟಿದೆ. ಮೃತ ವ್ಯಕ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮೂಲದ ತಾಶಿ ಧೋಂಡು (39) ಎಂದು ಗುರುತಿಸಲಾಗಿದೆ. ಏಪ್ರಿಲ್ 29ರ ಮಧ್ಯಾಹ್ನ ರಸ್ತೆ ಬದಿಯಲ್ಲಿ ಶವ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಪ್ರಾಥಮಿಕವಾಗಿ ಇದೊಂದು ‘ಹಿಟ್ ಅಂಡ್ ರನ್’ ಕೇಸ್ ಇರಬಹುದೆಂದು ಶಂಕಿಸಿದ್ದರು. ಆದರೆ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ ನಂತರ ವೈದ್ಯಕೀಯ ವರದಿಯಲ್ಲಿ ಹತ್ಯೆಯ ಸುಳಿವು ಸಿಕ್ಕಿದೆ. ತಾಶಿ ಧೋಂಡು ಅವರನ್ನು ಕಳೆದ ರಾತ್ರಿ ಬೇರೆಡೆ ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಹಂತಕರು ಶವವನ್ನು ಇಲ್ಲಿ ತಂದು ಎಸೆದಿದ್ದಾರೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಶವದ ಸ್ಥಿತಿ ಹಾಗೂ ರಸ್ತೆಯ ಪರಿಸರವನ್ನು ಅವಲೋಕಿಸಿದಾಗ ಇದೊಂದು ವ್ಯವಸ್ಥಿತ ಸಂಚು ಎಂಬುದು ಸ್ಪಷ್ಟವಾಗಿದೆ. ಮುಂಡಗೋಡಿನಿಂದ ತಾಶಿ ಧೋಂಡು ಅವರು ಧಾರವಾಡಕ್ಕೆ ಏಕೆ ಬಂದಿದ್ದರು? ಅವರೊಂದಿಗೆ ಯಾರು ಸಂಪರ್ಕದಲ್ಲಿದ್ದರು? ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಳೆ ದ್ವೇಷ ಅಥವಾ ಹಣಕಾಸಿನ ವಿಚಾರವಾಗಿ ಈ ಕೃತ್ಯ ನಡೆದಿದೆಯೇ ಎಂಬ ಆಯಾಮದಲ್ಲಿ ಧಾರವಾಡ ಗ್ರಾಮೀಣ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *