ಹಾಸನ: ಬೇಲೂರು ತಾಲ್ಲೂಕಿನ ಯುವತಿಯನ್ನ ಪ್ರೀತಿಸೋದಾಗಿ ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿರುವ ಪ್ರಿಯಕರಿನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರೇಮಿ ಪ್ರವೀಣ್ ಗೆ ಜೀವಾವದಿ ಶಿಕ್ಷೆ ವಿಧಿಸಿ ಹಾಸನದ 3ನೇ ಅಧಿಕ ಸಷೆನ್ಸ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇನ್ನು ಸಾಕ್ಷಿನಾಶ ಆರೋಪದಲ್ಲಿ ಎ2 ತಮ್ಮಣ್ಣಿಗೆ ಎರಡು ವರ್ಷ. ಕಠಿಣ ಜೈಲು ಶಿಕ್ಷೆ ವಿಧಿಸಿದೆ. 2018 ರ ಏಪ್ರಿಲ್ 22ರಂದು ತನ್ನ ಹುಟ್ಟು ಹಬ್ಬ ಆಚರಣೆ ಮಾಡಲು ಬಂದ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಯನ್ನು ಪ್ರವೀಣ್ ಉಸಿರುಗಟ್ಟಿಸಿ ಕೊಲೆ ಮಾಡಿದ್ದ. 2018 ರ ಏಪ್ರಿಲ್ 22 ರಂದು ಹಾಸನ ತಾಲ್ಲೂಕಿನ ಕಲ್ಕೆರೆ ಗ್ರಾಮದ ಬಳಿ ಹಾಡ್ಲಗೆರೆಯ ಪ್ರವೀಣ್, ತನ್ನ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಬಳಿಕ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಬಳಿಕ ಹಾಸನದ 3ನೇ ಅಧಿಕ ಸಷೆನ್ಸ್ ಕೋರ್ಟ್ ಸುದೀರ್ಘ ವಿಚಾರಣೆ ನಡೆಸಿ ಅಂತಿಮವಾಗಿ ಪ್ರಿಯಕರ ಪ್ರವೀಣ್ಗೆ ಜೀವಾವಧಿ ಶಿಕ್ಷೆ ಹಾಗೂ ಸಾಕ್ಷಿನಾಶ ಆರೋಪದಲ್ಲಿ ಎ2 ತಮ್ಮಣ್ಣಿಗೆ ಎರಡು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

