ಧಾರವಾಡ: ಬಿಎಸ್.ಸಿ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಯಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿದ್ಯಾಗಿರಿ ಠಾಣೆಯ ಇನ್‌ಸ್ಪೆಕ್ಟರ್ ಮೊಹಮ್ಮದ್ ರಫಿಕ್ ತಹಶೀಲ್ದಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಅಮಾನತಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ. ‘ಗಾಂಜಾ ಪ್ರಕರಣದಲ್ಲಿ ಆದಿತ್ಯನ ವಿಚಾರಣೆ ನಡೆಸಿ ಪೊಲೀಸರು ₹ 2ಸಾವಿರ ಹಣ ಕೊಡುವಂತೆ ಪೊಲೀಸರು ಆತನಿಗೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದೆ. ವಿದ್ಯಾಗಿರಿ ಠಾಣೆಯ ಇನ್‌ಸ್ಪೆಕ್ಟರ್ ರಫಿಕ್ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಠಾಣೆಯ ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳು ಮತ್ತು ಒಬ್ಬರು ಕಾನ್‌ಸ್ಟೆಬಲ್ ಸಹಿತ ಮೂವರನ್ನು ಬುಧವಾರ ಅಮಾನತುಗೊಳಿಸಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

