ಉಡುಪಿ:ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಉದ್ಯಮಿ ಹರೀಶ್ ಪೂಜಾರಿ ಅಲಿಯಾಸ್ “ಚೋಟು” ಎಂಬವರು ಮಹಿಳೆಯ ಮೇಲೆ ಕೈ ಹಾಕಿದ ಆರೋಪ ಕೇಳಿಬಂದಿದೆ. ಸಾರ್ವಜನಿಕರ ಮುಂದೆಯೇ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದ್ದು, ಸ್ಥಳದಲ್ಲಿದ್ದ ಜನರು ತಕ್ಷಣ ಪ್ರತಿಕ್ರಿಯಿಸಿ ಆರೋಪಿಯನ್ನು ಪ್ರಶ್ನಿಸಿದ್ದಾರೆ ಎಂದು ಹೇಳಲಾಗಿದೆ. ಹಲ್ಲೆಗೆ ಸೂಕ್ತ ಕಾರಣ ಮತ್ತು ಹೆಚ್ಚಿನ ವಿವರ ಪೋಲಿಸ್ ತನಿಖೆಯಿಂದ ಹೊರಬೇಕಾಗಿದೆ. ಘಟನೆಯ ಕುರಿತಾದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಘಟನೆಯ ಬಗ್ಗೆ ಇನ್ನಷ್ಟು ವಿವರಗಳು ಲಭ್ಯವಾಗಬೇಕಿದ್ದು, ಸಂಬಂಧಿತ ಅಧಿಕಾರಿಗಳು ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

