ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದು, ಈ ಸಂಬಂಧ ಬಾಲಕಿಯ ಸಹಪಾಠಿಯಾದ 16 ರ ಹರೆಯದ ಬಾಲಕನ ವಿರುದ್ಧ ಹೊಸದುರ್ಗ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ್ದಾರೆ. ಅಸ್ವಸ್ಥತೆ ಕಂಡು ಬಂದ ಹಿನ್ನೆಲೆಯಲ್ಲಿ ಬಾಲಕಿಯನ್ನು ವೈದ್ಯರ ಬಳಿಗೆ ಕರೆದೊಯ್ಯಲಾಗಿತ್ತು. ವೈದ್ಯರು ತಪಾಸಣೆ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿದ್ದಾಳೆಂದು ತಿಳಿದು ಬಂತು. ಈ ಬಗ್ಗೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

