Breaking News

ಬೆಂಗಳೂರಲ್ಲಿ ಮಿತಿ ಮೀರಿದ ಪುಂಡರ ಅಟ್ಟಹಾಸ : ಕುಡಿದ ಮತ್ತಲ್ಲಿ ಜನರ ಮೇಲೆ ಲಾಂಗು, ಮಚ್ಚು ಬೀಸಿ ಬೆದರಿಕೆ

ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದ್ದು, ಮದ್ಯದ ಅಮಲಿನಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು, ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಪುಂಡರ ಅಟ್ಟಹಾಸ ಇದೀಗ ಮಿತಿಮೀರಿದೆ. ಮನೆಗಳ ಕಿಟಕಿ ಮತ್ತು ಗಾಜುಗಳನ್ನು ಹೊಡೆದಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ಲಾಂಗ್ ಹಿಡಿದು ಓಡಾಡಿದ್ದಾರೆ. ರಸ್ತೆಗಳಲ್ಲಿ ಸಿಕ್ಕ ಸಿಕ್ಕವರನ್ನು ಮಚ್ಚಿನಿಂದ ಪುಂಡರು ಬೆದರಿಸಿದ್ದಾರೆ. ಪುಂಡರ ಅಟ್ಟಹಾಸದ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ನೀಡಿದ ಮನೆಗಳ ಕಿಟಕಿ ಮತ್ತು ಗಾಜುಗಳನ್ನು ಹೊಡೆದು ಅಟ್ಟಹಾಸ ಮೆರೆದಿದ್ದಾರೆ. ಇದನ್ನು ಪ್ರಶ್ನಿಸಿದ ಅಕ್ಕಪಕ್ಕದವರಿಗೂ ಮಚ್ಚು ತೋರಿಸಿ ಬೆದರಿಸಿದ್ದಾರೆ. ಪೊಲೀಸರಿಗೆ ಹೇಳಿದರೆ ಮುಗಿಸಿ ಬಿಡುತ್ತೇವೆ ಎಂದು ಪುಂಡರು ಬೆದರಿಸಿದ್ದಾರೆ ಗಲಾಟೆಯ ದೃಶ್ಯ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸರಿಯಾಗಿದೆ ಏಪ್ರಿಲ್ 25 ರಂದು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಪುಂಡರ ಹಟಹಾಸಕ್ಕೆ ಜನರು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಲೇಔಟ್ ಜನರು ಆಗ್ರಹಿಸಿದ್ದಾರೆ

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *