Breaking News

ಪೋಕ್ಸೋ-ಕೊಲೆ ಕೇಸ್‌ನಲ್ಲಿ ತಿರುವು: ಮರಣದಂಡನೆ ರದ್ದು, ಜೀವಾವಧಿ ಶಿಕ್ಷೆ-ಧಾರವಾಡ ಹೈಕೋರ್ಟ್ ಮಹತ್ವದ ತೀರ್ಪು!

ಧಾರವಾಡ: ನಗರದಲ್ಲಿ ಮಹತ್ವದ ತೀರ್ಪೊಂದು ಹೊರಬಂದಿದೆ. ಪೋಕ್ಸೋ ಹಾಗೂ ಕೊಲೆ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಆರೋಪಿಗೆ ಹೈಕೋರ್ಟ್ ಶಿಕ್ಷೆ ಕಡಿಮೆ ಮಾಡಿ ಜೀವಾವಧಿ ಶಿಕ್ಷೆ ವಿಧಿಸಿದೆ.ಕರ್ನಾಟಕದ ರಾಯಬಾಗ ತಾಲೂಕಿನ ಗ್ರಾಮವೊಂದರ ನಿವಾಸಿ ಉದ್ದಪ್ಪ ಗಾಣಗೇರ (39) 2017ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಯನ್ನು ಹತ್ಯೆಗೈದಿದ್ದನು.ಈ ಭೀಕರ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಬೆಳಗಾವಿ ಸೆಷನ್ ಕೋರ್ಟ್ 2024ರಲ್ಲಿ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು.
ಈ ತೀರ್ಪನ್ನು ಪ್ರಶ್ನಿಸಿ ಆರೋಪಿಯ ಪರ ವಕೀಲರು ಧಾರವಾಡ ಹೈಕೋರ್ಟ್ ಪೀಠದ ಮೊರೆ ಹೋಗಿದ್ದರು. ಪ್ರಕರಣವನ್ನು ಸವಿಸ್ತಾರವಾಗಿ ಪರಿಶೀಲಿಸಿದ ಹೈಕೋರ್ಟ್ ಸಾಕ್ಷ್ಯಾಧಾರಗಳು ಹಾಗೂ ವಿವಿಧ ಅಂಶಗಳನ್ನು ಕೂಲಂಕುಷವಾಗಿ ಪರಿಶೀಲಿಸಿತು.
ವಿಚಾರಣೆಯ ಬಳಿಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿ, ಮರಣದಂಡನೆಯನ್ನು ಕಡಿಮೆ ಮಾಡಿ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿದೆ. ಇದರಿಂದ ಆರೋಪಿಗೆ ಮರಣದಂಡನೆಯಿಂದ ರಿಯಾಯಿತಿ ದೊರೆತಂತಾಗಿದೆ. ಇದರ ಜೊತೆಗೆ ಪೀಡಿತೆಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಹೈಕೋರ್ಟ್ ಸೂಚಿಸಿದೆ. ಗಂಭೀರ ಪ್ರಕರಣವಾಗಿದ್ದರೂ ಶಿಕ್ಷೆಯ ಪ್ರಮಾಣದಲ್ಲಿ ಬದಲಾವಣೆ ಮಾಡುವ ಮೂಲಕ ನ್ಯಾಯಾಂಗವು ಸಮತೋಲನ ತೀರ್ಪು ನೀಡಿದೆ ಎಂಬ ಸಂದೇಶ ನೀಡಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *