ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಕೆ.ರೆಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದು, 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದ ತಾಳ ಬೆಟ್ಟದ ಪೊನ್ನಾಚಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೆಗಾಲಕ್ಕೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪಪತ್ರೆಗೆ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

