ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಸಮೀಪ ಕಾರು ಮತ್ತು ಆಟೋ ಢಿಕ್ಕಿಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಕುಂದಾಪುರದಿಂದ ಗಂಗೊಳ್ಳಿ ಕಡೆಗೆ ಸಾಗುತ್ತಿದ್ದ ರಿಕ್ಷಾವನ್ನು ನಾಗರಾಜ್ ದೇವಾಡಿಗ ಚಾಲನೆ ಮಾಡುತ್ತಿದ್ದು, ಅವರೊಂದಿಗೆ ಪತ್ನಿ ಸುಮತಿ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಹಿಂದಿನಿಂದ ಅಜಾಗರೂಕತೆಯಿಂದ ಬಂದ ಕಾರು ರಿಕ್ಷಾವನ್ನು ಓವರ್‌ಟೇಕ್ ಮಾಡಿ ಪೆಟ್ರೋಲ್ ಬಂಕ್ ಕಡೆಗೆ ಏಕಾಏಕಿ ಎಡಕ್ಕೆ ತಿರುಗಿದ ಪರಿಣಾಮ ಅಪಘಾತವಾಗಿ ರಿಕ್ಷಾ ಪಲ್ಟಿಯಾಗಿದೆ. ರಿಕ್ಷಾ ಚಾಲಕ ನಾಗರಾಜ್ ಹಾಗೂ ಸುಮತಿ ಅವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

