Breaking News

ಪಡಿತರ ಅಕ್ಕಿ ಅಕ್ರಮ ಸಂಗ್ರಹ: ಬಂಧನ

ಕೊಳ್ಳೇಗಾಲ: ತಾಲ್ಲೂಕಿನ ಸಿಲ್ಕಲ್ ಪುರ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ಗ್ರಾಮದ ಮಹದೇವಯ್ಯ (70) ಎಂಬುವರನ್ನು ಪೊಲೀಸರು ಹಾಗೂ ಆಹಾರ ಇಲಾಖೆ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಯಿಂದ 766 ಕೆ.ಜಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಈತ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪಡಿತರ ಅಕ್ಕಿಯನ್ನು ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಲುವಾಗಿ ಮನೆಯ ಮುಂದೆ ಸಂಗ್ರಹಿಸಿಟ್ಟಿದ. ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಶಿರೆಸ್ತೇದಾರ್ ವಿಶ್ವನಾಥ್ ಹಾಗೂ ಅಗರ ಮಾಂಬಳ್ಳಿ ಪೊಲೀಸ್ ಠಾಣೆ ಪಿಎಸ್‌ಐ ಕರಿಬಸಪ್ಪ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ಅಕ್ಕಿಯನ್ನು ಜಪ್ತಿ ಮಾಡಿದರು. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ. ದಾಳಿಯಲ್ಲಿ ಎಎಸ್‌ಐ ಚಿಕ್ಕಸ್ವಾಮಿ, ಕಾನ್‌ಸ್ಟೆಬಲ್‌ ಶಿವಕುಮಾರ್ ಭಾಗವಹಿಸಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *