ಗದಗ: ತೋಂಟದಾರ್ಯ ಮಠದ ಜಾತ್ರೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಡ್ಯಾನ್ಸಿಂಗ್ ಫ್ಲೈ ಜೋಕಾಲಿಯ 20ಕ್ಕೂ ಹೆಚ್ಚು ತೊಟ್ಟಿಲುಗಳು ಏಕಾಏಕಿ ಕಳಚಿ ಬಿದ್ದಿದ್ದು, ಬ್ರೇಕ್ಡ್ಯಾನ್ಸ್ ಆಡುತ್ತಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮಕ್ಕಳು, ಮಹಿಳೆಯರು ಮತ್ತು ಪುರುಷರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಾಳುಗಳನ್ನ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆಪೆ ಗುಣಮಟ್ಟದ ಬ್ರೇಕ್ಡ್ಯಾನ್ಸ್ ಅಳವಡಿಕೆ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಗದಗ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

