Breaking News

ಮದ್ದಯ್ಯನಹುಂಡಿ: ಲಾರಿ-ಕಾರು ಅಪಘಾತ- ಮೂವರು ಸಾವು

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಭಾನುವಾರ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಗುಂಡ್ಲುಪೇಟೆಯಿಂದ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿ ಮದ್ದಯ್ಯನಹುಂಡಿ ಸಮೀಪದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದ್ದು ಕೇರಳದ ಕಣ್ಣೂರು ಮೂಲದ ಕಾರು ಚಾಲಕ ಮುನೀರ್ (30), ಮುನಿರಾ (45) ಹಾಗೂ ಮೂರೂವರೆ ವರ್ಷದ ಬಾಲಕ ಮೋಹಿಜ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸಾನಿಯಾ ಮಿರ್ಜಾ, ಸಾಹಿಲ್, ಬಿಲಾಜ್, ಪರ್ವಿನ್ ಎಂಬುವವರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳ ಪೈಕಿ ಪರ್ವಿನ್ ಗರ್ಭಿಣಿಯಾಗಿದ್ದರು ತಿಳಿದು ಬಂದಿದೆ. ಗುಂಡ್ಲುಪೇಟೆಯ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಹಳ್ಳಕ್ಕೆ ಬಿದ್ದಿದೆ. ಲಾರಿಯ ಮುಂಬದಿಯ ಚಕ್ರಗಳು ಕಳಚಿ ಬಿದ್ದಿವೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *