ಔರಾದ್: ತಾಲ್ಲೂಕಿನ ಕೌಠಾ (ಬಿ) ಗ್ರಾಮದಲ್ಲಿ ರೈತೊಬ್ಬರು ಕಬ್ಬಿನ ಹೊಲದಲ್ಲಿ ಬೆಳೆದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.ಖಚಿತ ಮಾಹಿತಿ ಮೇರೆಗೆ ಸರ್ವೆ ನಂಬರ್ 48ರಲ್ಲಿ ಬೆಳೆದ ₹4.50 ಲಕ್ಷ ಮೌಲ್ಯದ 11 ಗಾಂಜಾ ಗಿಡ ಜಪ್ತಿ ಮಾಡಿಕೊಳ್ಳಲಾಗಿದೆ. ಬೀರಪ್ಪ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಈ ಕುರಿತು ಸಂತಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್‌ಐ ದಿನೇಶ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

