Breaking News

₹42.30 ಲಕ್ಷದ ಮಾದಕ ದ್ರವ್ಯ ವಶ: ಇಬ್ಬರ ಸೆರೆ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಚಿ ಗ್ರಾಮದ ಪಂಜಾಲಕ್ರಾಸ್ ಎಂಬಲ್ಲಿ ಶನಿವಾರ ನಿಷೇಧಿತ ಎಂಡಿಎಂಎ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ₹42.30 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿಸಿದ್ದಾರೆ. ಎಸ್‌ಐ ಮಂಜುನಾಥ ಟಿ. ಅವರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳಾದ ಬಂಟ್ವಾಳ ಬೊಳಂತೂರು ನಿವಾಸಿಗಳಾದ ಮೊಹಮ್ಮದ್‌ ನಿಜಾಮುದ್ದೀನ್‌ (30), ಆತನ ಸಹೋದರ ಮೊಹಮ್ಮದ್‌ ಶಾಹಿಂ (19) ಸಿಕ್ಕಿಬಿದ್ದಿದ್ದಾರೆ. ನೈಜೀರಿಯಾದ ಅಪರಿಚಿತ ವ್ಯಕ್ತಿಯಿಂದ ಬೆಂಗಳೂರಿನಲ್ಲಿ ಎಂಡಿಎಂಎ ಖರೀದಿಸಿ, ಮಾರಾಟ ಮಾಡಲು ಸಾಗಿಸುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಆರೋಪಿಗಳಿಂದ ಮಾದಕ ವಸ್ತು ಸಹಿತ 3 ಮೊಬೈಲ್ ಫೋನ್, ಕೃತ್ಯಕ್ಕೆ ಬಳಸಿದ ಬೊಲೆರೊ ವಾಹನ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *