Breaking News

ಟೈಮಿಂಗ್ಸ್ ವಿಚಾರದಲ್ಲಿ ಗಲಾಟೆ

ಮಂಗಳೂರು: ಬಜಪೆ ಬಸ್ಸು ನಿಲ್ದಾಣದಲ್ಲಿ ಬಸ್ಸಿನ ಸಮಯದ ಚಾರವಾಗಿ ಖಾಸಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕರ ನಡುವೆ ಪರಸ್ಪರ ಹೊಡೆದಾಟ ನಡೆದಿದ್ದು, ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ಸೊಂದರ ಚಾಲಕ ಶ್ರೀನಿವಾಸ (26) ಮತ್ತು ಇನ್ನೊಂದು ಬಸ್ಸಿನ ನಿರ್ವಾಹಕ ಸಂತೋಷ್ ಶೆಟ್ಟಿ (52) ಪರಸ್ಪರ ಹೊಡೆದಾಡಿಕೊಂಡವರು. ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು ಬಜಪೆ ಬಸ್ಸು ನಿಲ್ದಾಣದ ಬಳಿ ಬಂದಾಗ ಪೊಲೀಸರ ಮುಂದೆಯೇ ಈ ಇಬ್ಬರು ಅವಾಚ್ಯ ಶಬ್ದಗಳಿಂದ ಬೈದು ಹೊಡೆದಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *