Breaking News

ಐಷಾರಾಮಿ ಕಾರಿನಲ್ಲಿ ಬಂದ್ರು, ಬೀದಿಯಲ್ಲಿದ್ದ ಹಸುವನ್ನೇ ಕದ್ದುಕೊಂಡು ಹೋದ್ರು!

ಹುಬ್ಬಳ್ಳಿ: ನಗರದಲ್ಲಿ ಐಷಾರಾಮಿ ಕಾರುಗಳಲ್ಲಿ ಬಂದು ರಸ್ತೆ ಬದಿಯ ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಶಿವಮೊಗ್ಗ ಮೂಲದ ಮುಬಾರಕ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ಬೇರೆ ಬೇರೆ ಜಿಲ್ಲೆಗಳಿಂದ ಐಷಾರಾಮಿ ಕಾರುಗಳನ್ನು ತಂದು, ಅವುಗಳಿಗೆ ಕಪ್ಪು ಬಣ್ಣದ ಸ್ಟಿಕ್ಕರ್ ಅಂಟಿಸಿ ಗುರುತು ಸಿಗದಂತೆ ಸಂಚರಿಸುತ್ತಿದ್ದರು. ಹುಬ್ಬಳ್ಳಿಯ ಸೆಟಲ್‌ಮೆಂಟ್ ಹಾಗೂ ಹಳೇ ಹುಬ್ಬಳ್ಳಿ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಗಳನ್ನೇ ಆಧಾರವಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳಿಗೆ ಹೆಡೆಮುರಿ ಕಟ್ಟಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *