ಪುತ್ತೂರು: ಕಬಕ ಗ್ರಾಮದ ವಿದ್ಯಾಪುರದಲ್ಲಿ ವ್ಯಕ್ತಿಯೊಬ್ಬ ಕಾರೊಂದನ್ನು ತಡೆದು ಚಾಲಕನಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಮೇ 4ರಂದು ನಡೆದಿದೆ. ಕಬಕ ನಿವಾಸಿ ಗಣೇಶ್ ವಿ. ಹಲ್ಲೆಗೊಳಗಾದವರು. ಅವರು ಮೇ 4ರಂದು ಮಧ್ಯಾಹ್ನ ಪೂಜೆಗೆ ಹೋದವರು ಕಾರಿನಲ್ಲಿ ಮನೆಗೆ ಮರಳುತ್ತಿರುವ ಸಂದರ್ಭ ವಿದ್ಯಾಪುರದಲ್ಲಿ ರಸ್ತೆ ಬದಿಯ ಮನೆಯೊಂದರಲ್ಲಿ ಯಾವುದೋ ಕಾರ್ಯಕ್ರಮ ನಡೆಯುತ್ತಿತ್ತು. ಹೀಗಾಗಿ ಅವರು ಕಾರನ್ನು ನಿಧಾನವಾಗಿ ಚಲಾಯಿಸುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿಯೊಬ್ಬ ಕಾರನ್ನು ತಡೆದು ಕಾರು ಚಲಾಯಿಸಿದ ಕುರಿತು ತಕರಾರು ತೆಗೆದು ಗಣೇಶ್ ಅವನನ್ನು ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿ ಹೋಗಿದ್ದಾನೆ ಎನ್ನಲಾಗಿದೆ. ಗಣೇಶ್ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

