Breaking News

ಭೀಕರ ಅಪಘಾತ: ಎಕ್ಸ್​ಪ್ರೆಸ್​ವೇನಲ್ಲಿ ಓವರ್​ ಟೇಕ್​ ಮಾಡುವಾಗ ಕಾರಿಗೆ ಡಿಕ್ಕಿ: ಐವರು ಪೊಲೀಸ್ ಸಿಬ್ಬಂದಿ ಸಾವು |

ಚಂಡೀಗಢ: ಹರಿಯಾಣದ ನುಹ್ ಜಿಲ್ಲೆಯ ಕೆಎಂಪಿ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು(ಮೇ 05) ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಚಲಿಸುತ್ತಿದ್ದ ಮತ್ತು ಓವರ್ ಟೇಕ್ ಮಾಡುವ ಭರದಲ್ಲಿ ಎಸ್‌ಯುವಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಧುಲಾವತ್ ಟೋಲ್ ಪ್ಲಾಜಾ ಬಳಿ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ. ಪಲ್ವಾಲ್ ದಿಕ್ಕಿನಿಂದ ಬರುತ್ತಿದ್ದ ಕಪ್ಪು ಬಣ್ಣದ ಎಸ್‌ಯುವಿ ಚಾಲಕ ಮತ್ತೊಂದು ವಾಹನವನ್ನು ಹಿಂದಿಕ್ಕಲು ಯತ್ನಿಸಿ ನಿಯಂತ್ರಣ ತಪ್ಪಿ ಮುಂಭಾಗದಲ್ಲಿದ್ದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಮೃತಪಟ್ಟ ಐವರು ಪೊಲೀಸರು ಉತ್ತರ ಪ್ರದೇಶದ ಜಲೌನ್ ಜಿಲ್ಲೆಯಲ್ಲಿ ನಿಯೋಜನೆಗೊಂಡಿದ್ದರು ಎನ್ನಲಾಗಿದೆ. ಡಿಕ್ಕಿ ಪರಿಣಾಮ ಎಸ್‌ಯುವಿ ಪಲ್ಟಿಯಾಗಿದ್ದು, ಬಳಿಕ ಚಿದ್ರಗೊಂಡಿದೆ. ಕಾರಿನ ಅವಶೇಷಗಳಡಿ ಶವಗಳನ್ನು ರಕ್ಷಣಾ ತಂಡ ಹೊರತೆಗೆದಿದೆ. ವಾಹನದಿಂದ ವಶಪಡಿಸಿಕೊಂಡ ಗುರುತಿನ ಚೀಟಿಯ ಸಹಾಯದಿಂದ ಬಲಿಪಶುಗಳ ಪೊಲೀಸ್ ಸಿಬ್ಬಂದಿ ಎಂದು ತಿಳಿದು ಬಂದಿದೆ.
ಈ ಕುರಿತು ಮಾತನಾಡಿರುವ ಟೌರು ಸದರ್ ಪೊಲೀಸ್ ಠಾಣೆ ಮುಖ್ಯಸ್ಥ ಶಿಶ್ ರಾಮ್ ಯಾದವ್, ಅಪಘಾತದಲ್ಲಿ ಸಾವನ್ನಪ್ಪಿದವರೆಲ್ಲರೂ ಜಲೌನ್ ಜಿಲ್ಲೆಯಲ್ಲಿ ನಿಯೋಜಿತರಾದ ಉತ್ತರ ಪ್ರದೇಶ ಪೊಲೀಸ್ ಸಿಬ್ಬಂದಿ. ನಾವು ಜಲೌನ್ ಪೊಲೀಸ್ ವರಿಷ್ಠಾಧಿಕಾರಿಗೆ ಮಾಹಿತಿ ನೀಡಿದ್ದೇವೆ. ಘಟನೆಯ ಕಾರಣದ ಬಗ್ಗೆ ತನಿಖೆಗೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *