Breaking News

ಅಮನ್ ನಗರದಲ್ಲಿ ತಲ್ವಾರ್ ದಾಳಿ: ಮೂವರು ಯುವಕರು ಗಂಭೀರ!

ಬೆಳಗಾವಿ: ಇಲ್ಲಿನ ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ದುಷ್ಕರ್ಮಿಗಳು ತಲ್ವಾರ್ ದಾಳಿ ನಡೆಸಿದ ಭೀಕರ ಘಟನೆ ನಡೆದಿದೆ. ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ.ದಾಳಿಗೆ ಒಳಗಾದವರನ್ನು ವಲಿ ಶೇಖ್, ಇಮಾಮ್ ಶೇಖ್ ಮತ್ತು ಮಜೀದ್ ಶೇಖ್ ಎಂದು ಗುರುತಿಸಲಾಗಿದೆ.ಗಾಯಾಳುಗಳನ್ನು ತಕ್ಷಣವೇ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಕೂಡಲೇ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ಗಾಯಾಳುಗಳ ಕುಟುಂಬಸ್ಥರು ಆರೋಪಿಗಳ ತಕ್ಷಣ ಬಂಧನಕ್ಕೆ ಆಗ್ರಹಿಸಿದ್ದಾರೆ. ಘಟನೆ ನಡೆದ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *