Breaking News

ಮರಳು ಲಾರಿ ತಡೆದ ಅಧಿಕಾರಿಗಳಿಗೆ ಬೆದರಿಕೆ: ವ್ಯಕ್ತಿ ಬಂಧನ

ಔರಾದ್: ಇಲ್ಲಿಗೆ ಸಮೀಪದ ಮಹಾರಾಷ್ಟ್ರದ ಗಡಿಯಲ್ಲಿ ಮರಳು ಲಾರಿ ತಡೆದು ವಿಚಾರಣೆ ನಡೆಸುತ್ತಿದ್ದ ಗಣಿ ಮತ್ತು ಭೂವಿಜ್ಞಾನ (ಮೈನ್ಸ್) ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಭಾನುವಾರ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ. ತಾಲ್ಲೂಕಿನ ಬಸವನವಾಡಿ ತಾಂಡಾದ ಚಂದರ್ ಪವಾರ್ ಬಂಧಿತ ಆರೋಪಿ. ಅವರು ಭಾನುವಾರ ವನಮಾರಪಳ್ಳಿ ಬಳಿ ಮರಳು ಲಾರಿ ತಪಾಸಣೆ ಮಾಡುತ್ತಿದ್ದ ಇಬ್ಬರು ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ. ಅಧಿಕಾರಿಗಳು ನೀಡಿದ ದೂರಿನ ಮೇರೆ ಮರಳು ಲಾರಿ ಜಪ್ತಿ ಮಾಡಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಔರಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *