ಬೆಂಗಳೂರು : ಅಂತರರಾಷ್ಟ್ರೀಯ ಮಟ್ಟದ ಡ್ರಗ್ ಜಾಲವನ್ನು ಯಶವಂತಪುರ ಪೊಲೀಸರು ಬೇಧಿಸಿದ್ದಾರೆ. ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳಾದ ಸೈಯದ್ ಸುಹೇಲ್, ಮೊಹಮ್ಮದ್ ಸಮೀರ್, ಸಾದಿಕ್ ಪಾಷಾ ಮತ್ತು ಮೊಹಮ್ಮದ್ ಹಕ್ರನ್ನು ಬಂಧಿಸಲಾಗಿದ್ದು, ಈ ನಾಲ್ವರಿಂದ 9 ಕೋಟಿ ರೂಪಾಯಿ ಮೌಲ್ಯದ 8 ಕೆಜಿ ಎಂಡಿಎಂಎ ಸೀಜ್ ಮಾಡಲಾಗಿದೆ. ಆರೋಪಿಗಳು ನೈಜೀರಿಯಾ ಪ್ರಜೆಗಳಿಂದ ಡ್ರಗ್ಸ್ ಖರೀದಿಸಿ ನಗರದಲ್ಲಿ ಸ್ಥಳೀಯರಿಗೆ ಪೂರೈಸುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಬಂಧಿತರಿಂದ ಒಂದು ಕಾರು ಹಾಗೂ ಐದು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಲ್ಲಿ ಸೈಯದ್ ಸುಹೇಲ್ ಹೊಸಕೋಟೆ ಠಾಣೆಯ ರೌಡಿಶೀಟರ್ ಆಗಿದ್ದು, ಈ ಹಿಂದೆ ಪ್ರಕರಣವೊಂದರಲ್ಲಿ ಪೊಲೀಸರು ಈತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು. ಸದ್ಯ ಈ ಜಾಲಕ್ಕೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Check Also
ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …
bigtvnews | Hubli Dharwad News | Kannada News | Karnataka News Hubli News | News In Hubli | Local news

