ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಲ್ ರೋಡ್ ಸಮೀಪ ಕೆಎಸ್ಸಾರ್ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಅರಣ್ಯ ಪ್ರದೇಶಕ್ಕೆ ನುಗ್ಗಿದ ಘಟನೆ ನಡೆದಿದೆ. ಹನೂರಿನಿಂದ ಜಲ್ಲಿಪಾಳ್ಯ ಕಡೆಗೆ ತೆರಳುತ್ತಿದ್ದ ಬಸ್, ಎದುರಿಗೆ ಬಂದ ಮತ್ತೊಂದು ವಾಹನವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದೆ ಎಂದು ತಿಳಿದುಬಂದಿದೆ. ಅಪಘಾತದ ವೇಳೆ ಬಸ್‌ನಲ್ಲಿದ್ದ 39 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇತ್ತೀಚೆಗೆ ಮಲೆಮಹದೇಶ್ವರಬೆಟ್ಟ ಮಾರ್ಗದಲ್ಲಿ ಕೆಎಸ್ಸಾರ್ಟಿಸಿ ಬಸ್ ಪಲ್ಟಿಯಾದ ಘಟನೆಯ ನಂತರ ಮತ್ತೊಂದು ಅಪಘಾತ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

