ತೀರ್ಥಹಳ್ಳಿ: ಪಟ್ಟಣದ ಎ.ಪಿ.ಎಂ.ಸಿ ಎದುರು ರಾಜ್ಯ ಹೆದ್ದಾರಿ ಪಕ್ಕದಲ್ಲಿ ಪಟ್ಟಣ ಪಂಚಾಯಿತಿಯಿಂದ ಲೈಸನ್ಸ್ ಪಡೆಯದೆ ನಿರ್ಮಿಸಿದ್ದ ಶೆಡ್ ನಲ್ಲಿ ಮೇ.5ರ ತಡರಾತ್ರಿ ಸುಮಾರು 3 ಗಂಟೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ತೀವ್ರವಾಗಿ ಹಬ್ಬಿ ಶೆಡ್ನೊಳಗಿದ್ದ ಪೀಠೋಪಕರಣಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟುಹೋಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಕಾಣಿಸಿಕೊಂಡ ಕಾರಣ ಮತ್ತು ನಷ್ಟದ ನಿಖರ ಅಂದಾಜಿಗಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

