Breaking News

ಕಡಂಗ ಗ್ರಾಮದಲ್ಲಿ 3 ಅಂಗಡಿ ಬೆಂಕಿಗಾಹುತಿ

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಕಡಂಗ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿ ಹೋಟೆಲ್, ಮೊಬೈಲ್ ಅಂಗಡಿ, ಹಣ್ಣು, ತರಕಾರಿ ಅಂಗಡಿಗಳು ಭಸ್ಮವಾಗಿವೆ. ಇಲ್ಲಿಂದ ಸುಮಾರು 30 ಕಿ.ಮೀ ದೂರದ ಗೋಣಿಕೊಪ್ಪಲುವಿನಿಂದ ಅ‌ಗ್ನಿಶಾಮಕ ಅಧಿಕಾರಿಗಳು ಬಂದು ಬೆಂಕಿಯನ್ನು ಸಂಪೂರ್ಣ ನಂದಿಸಿದರು. ಅಷ್ಟರಲ್ಲಿ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿದ್ದವು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಟ್ಯಾಂಕರ್‌ ಮೂಲಕ ನೀರು ತಂದು ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದಾಗ್ಯೂ, ಬೆಂಕಿ ಕೆನ್ನಾಲಿಗೆ ನಿಯಂತ್ರಣ ಬರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಪ್ರಭಾರ ಠಾಣಾಧಿಕಾರಿ ಸುನಿಲ್ ಕುಮಾರ್, ಪ್ರಮುಖ ಅಗ್ನಿಶಾಮಕ ದೇವೇಂದ್ರಪ್ಪ, ಸಿಬ್ಬಂದಿ ಅರುಣ್, ಸಂತೋಷ್, ಹನುಮಂತಪ್ಪ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *