Breaking News

ಆಟೊ ಚಾಲಕನ ಮೇಲೆ ಹಲ್ಲೆ: ನಾಲ್ವರ ವಿರುದ್ಧ ದೂರು ದಾಖಲು

ನಾಪೋಕ್ಲು:ಆಟೊ ಚಾಲಕ ಝಕರಿಯ ಎಂಬುವವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಸಿದ್ದಿಕ್, ಮಹಮ್ಮದ್ ಅಲಿ, ನಾಫಿ ಸೇರಿ ನಾಲ್ವರ ವಿರುದ್ಧ ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿಗೆ ಸಮೀಪದ ಬೇತುಗ್ರಾಮದಲ್ಲಿ ಹಲ್ಲೆ ನಡೆದಿದ್ದು, ಹಲ್ಲೆಗೊಳಗಾದ ಝಕರಿಯ ತೀವ್ರ ರಕ್ತಸ್ರಾವದಿಂದ ಚರಂಡಿಗೆ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಹಾಗೂ ಪೊಲೀಸರು ಅವರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ತಿ ವಿಚಾರಕ್ಕೆ ವೈಷಮ್ಯದಿಂದ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಈಚೆಗೆ ಬಲ್ಲಮಾವಟಿ ಗ್ರಾಮದಲ್ಲಿನ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಬಂಟಿಂಗ್ ಕಟ್ಟುವ ವೇಳೆ ಗೌತಮ್ ಎಂಬಾತನಿಗೆ ಆರೋಪಿಗಳು ಹಲ್ಲೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *