Breaking News

ಬಿಜೆಪಿ ಶಾಸಕಿ ರತ್ನ ದೇಬನಾಥ್ ನಿವಾಸದ ಬಳಿ ಬಾಂಬ್ ಸ್ಫೋಟ; ಐವರು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಬಿಜೆಪಿ ಸಿಎಂ ಅಭ್ಯರ್ಥಿ ಸುವೆಂದು ಅಧಿಕಾರಿ ಪಿಎ ಚಂದ್ರನಾಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಬೆನ್ನಲ್ಲೇ ಹಲವೆಡೆ ಹಿಂಸಾಚಾರ ತೀವ್ರಗೊಳ್ಳುತ್ತಿದೆ. ಬಿಜೆಪಿ ಶಾಸಕಿ ರತ್ನ ದೇಬನಾಥ್ ಅವರ ನಿವಾಸದ ಬಳಿ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಐವರು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪಾನಿಹಾಟಿ ಕ್ಷೇತ್ರದ ಬಿಜೆಪಿ ನೂತನ ಶಾಸಕಿಯಾಗಿರುವ ರತ್ನ ದೇಬನಾಥ್ ಅವರ ಮನೆ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬೀಡು ಬಿಟ್ಟಿದ್ದಾರೆ. ಶಾಸಕಿ ನಿವಾಸ ಹಾಗೂ ಸುತ್ತಮುತ್ತ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *