Breaking News

ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆ: 50 ಕೆ.ಜಿ ಗಾಂಜಾ ವಶ

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಆರು ದಿನಗಳಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ನಡೆಸಿದ ಕಾರ್ಯಾರಣೆಯಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 50 ಕೆ.ಜಿಗೂ ಅಧಿಕ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.ಬ್ಯಾಂಕಾಕ್‌ನಿಂದ ಗಂಜಾ ಕಳ್ಳ ಕಳ್ಳ ಸಾಗಣೆ ಹೆಚ್ಚಿದ್ದು, ಮೇ ತಿಂಗಳಲ್ಲಿ ನಿರಂತರವಾಗಿ ಬೀಗಿ ತಪಾಸಣೆಯಲ್ಲಿರುವ ಕಸ್ಟಮ್ಸ್ ಅಧಿಕಾರಿಗಳು ಕೇವಲ 6 ದಿನದಲ್ಲಿಯೇ 50 ಕೆ.ಜಿಗೂ ಅಧಿಕ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬಹುತೇಕ ಪ್ರಕರಣಗಳಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಮಾಣಿಕರೇ ಆರೋಪಿಗಳಾಗಿದ್ದಾರೆ. ಎಲ್ಲ ಪ್ರಕರಣಗಳಲ್ಲಿಯೂ ಬ್ಯಾಂಕಾಕ್‌ನಿಂದಲೇ ಹೈಡ್ರೋಫೋನಿಕ್ ಗಾಂಜಾವೂ ಕಳ್ಳ ಸಾಗಣೆಯಾಗುತ್ತಿರುವ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಬುಧವಾರವೂ ಕಸ್ಟಮ್ಸ್‌ ಅಧಿಕಾರಿಗಳು ಮೂವರು ಪ್ರಯಾಣಿಕರಿಂದ 12.96 ಕೆ.ಜಿ ಹೈಡ್ರೋಫೋನಿಕ್‌ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಮೂವರನ್ನು ಬಂಧಿಸಿದ್ದಾರೆ. ಬ್ಯಾಂಕಾಕ್‌ನಿಂದ ಬಂದ ಮೂವರು ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಲೇಗೇಜ್‌ ಮತ್ತು ಚೆಕ್‌ ಇನ್ ಬ್ಯಾಗ್‌ಗಳಲ್ಲಿ ಅಡಗಿಸಿ ಕಳ್ಳ ಸಾಗಣೆ ಪತ್ತೆಯಾಗಿದೆ. ವಶಕ್ಕೆ ಪಡೆದ ಗಾಂಜಾದ ಮೌಲ್ಯ ₹4.53 ಕೋಟಿ ಎಂದು ಅಂದಾಜಿಸಲಾಗಿದೆ. ಮೂವರು ಪ್ರಯಾಣಿಕರ ವಿರುದ್ಧ ಮಾದಕ ವಸ್ತುಗಳ ನಿಷೇಧ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *