ಕುಕ್ಕೆ ಸುಬ್ರಹ್ಮಣ್ಯದ ಷಷ್ಠಿ ಲಾಡ್ಜ್ ಎದುರಿನ ರಸ್ತೆಯಲ್ಲಿ ನಿಂತಿದ್ದ ದನವೊಂದನ್ನು ಅಪರಿಚಿತರು ಕಳವು ಮಾಡಿಕೊಂಡು ಕಾರಿನಲ್ಲಿ ತುಂಬಿಸಿಕೊಂಡು ಹೋದ ಘಟನೆ ಬೆಳಕಿಗೆ ಬಂದಿದೆ. ಮೇ 6ರಂದು ಬೆಳಗಿನ ಜಾವ ಸುಮಾರು 2.30ರಿಂದ 2.50 ಗಂಟೆಯ ಅವಧಿಯಲ್ಲಿ ಘಟನೆ ನಡೆದಿದ್ದು, ಸಮೀಪದ ಅಂಗಡಿಯೊಂದರ ಸಿಸಿ ಕೆಮರಾದಲ್ಲಿ ಘಟನೆ ಸೆರೆಯಾಗಿದೆ. ಇಬ್ಬರು ವ್ಯಕ್ತಿಗಳು ರಸ್ತೆ ಬದಿಯಲ್ಲಿದ್ದ ದನವನ್ನು ಹಿಡಿದು ಕಾರೊಂದರಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯಗಳು ದಾಖಲಾಗಿವೆ. ಈ ಕುರಿತು ಶೇಖರ ಎ. ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

