Breaking News

ಕೋಲಾರ: ಕಣ್ಣಿಗೆ ಖಾರದಪುಡಿ ಎರಚಿ ದರೋಡೆ ಮಾಡಿದ್ದವರ ಬಂಧನ

ಮುಳಬಾಗಿಲು: ಚಾಕು ತೋರಿಸಿ, ಕಣ್ಣಿಗೆ ಖಾರದ ಪುಡಿ ಎರಚಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವಸೂಲಿ ಹಣ ಕಿತ್ತು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ಬಳಿ ಇದ್ದ ₹5.90 ಲಕ್ಷವನ್ನು ವಶಕ್ಕೆ ಪಡೆಯಲಾಗಿದೆ ಎಂದು ಮುಳಬಾಗಿಲು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ. ಮುಳಬಾಗಿಲು ನಗರದ ಟಿಪ್ಪು ಸುಲ್ತಾನ್ (28), ಸಾಧಿಕ್ ಪಾಷಾ (30) ಹಾಗೂ ತೌಹೀದ್ ಖಾನ್ (26) ಬಂಧಿತರಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಏಪ್ರಿಲ್ 7ರಂದು ಮುಳಬಾಗಿಲು ನಗರದ ಶಾಮೀರ್ ಮೊಹಲ್ಲಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕ್ಷೇಮಾಭಿವೃದ್ಧಿ ಸಂಘದ ವಾರದ ಕಂತಿನ ಹಣವನ್ನು ಸಂಘದ ಪ್ರತಿನಿಧಿ ಶಶಿಕಲಾ ಎಂಬುವರು ಬ್ಯಾಂಕ್‌ಗೆ ಕಟ್ಟಲು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಆರೋಪಿಗಳು ಕಚೇರಿ ಒಳನುಗ್ಗಿ ಶಶಿಕಲಾ ಅವರಿಗೆ ಚಾಕು ತೋರಿಸಿ, ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಮುಳಬಾಗಿಲು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಎಎಸ್‌ಪಿ ಮನೀಷಾ ಮೋಹಿನ್ ಭೇಟಿ ನೀಡಿ, ಪರಿಶೀಲಿಸಿದ್ದರು. ಜೊತೆಗೆ ಕಾರ್ಯಾಚರಣೆ ಕೈಗೊಂಡಿದ್ದ ಪೊಲೀಸರು, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ವಶಕ್ಕೆ ಪಡೆದು, ಕರೆತಂದಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *