ಮಂಗಳೂರು: ಮಾದಕ ವಸ್ತು ಬೆರೆಸಿದ ಸಿಗರೇಟು ಸೇವನೆ ಮಾಡಿದ ಆರೋಪದಡಿ ಯುವಕನೊಬ್ಬನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಯ್ಗೆ ಬಜಾರ್ ನಿವಾಸಿ ಪ್ರಥಮ್ ಕೋಟಿಯಾನ್ ಆರೋಪಿ. ಬುಧವಾರ ರಾತ್ರಿ ಗಸ್ತಿನಲ್ಲಿರುವಾಗ ಬಿಜೈ ಕಾಪಿಕಾಡ್ ಆನೆಗುಂಡಿ ರಸ್ತೆಯಲ್ಲಿ ಸಿಗರೇಟ್ ಸೇದುತ್ತ ನಿಂತಿದ್ದ ಯುವಕನನ್ನು ಕಂಡು ಅವನ ಬಳಿ ಹೋದಾಗ ಆತ ಸಿಗರೇಟನ್ನು ಚರಂಡಿಗೆ ಎಸೆದಿದ್ದಾನೆ. ಅನುಮಾನಗೊಂಡು ವಿಚಾರಣೆಗೆ ಒಳಪಡಿಸಿದಾಗ ಮಾದಕ ವಸ್ತು ಬೆರೆಸಿ ಸಿಗರೇಟು ಸೇದುತ್ತಿರುವ ಬಗ್ಗೆ ತಿಳಿಸಿದ್ದಾನೆ. ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

