Breaking News

ಅರಣ್ಯ ಸಿಬಂದಿಗೆ ಬೆದರಿಕೆ ; ಆರೋಪಿ ಬಂಧನ

ಕುಂದಾಪುರ: ಸದಾಶಿವ ಕೋಟೆಕಾರ್ ಎಂಬುವರು ಬೆದರಿಸಿ, ಹಣಕ್ಕೆ ಬೆದರಿಕೆ ಹಾಕಿರುವುದಾಗಿ ಅರಣ್ಯ ಇಲಾಖೆಯಲ್ಲಿ ಅರಣ್ಯ ಗಸ್ತು ಪಾಲಕನಾಗಿರುವ ಆನಂದ ಬಳೆಗಾರ್ ದೂರು ನೀಡಿದ್ದಾರೆ.ಪ್ರಕರಣ ಸಂಬಂಧ ಆರೋಪಿ ಸದಾಶಿವ ಎಂಬಾತನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಮೇ 1 ರಂದು ಆರೋಪಿಯು ನನ್ನ ಇಲಾಖಾ ಸಮವಸ್ತ್ರಕ್ಕೆ ಕೈ ಹಾಕಿ, ನಿನ್ನ ಎಲ್ಲ ವಿಚಾರ ನನಗೆ ತಿಳಿದಿದೆ. ನನಗೆ 25 ಸಾವಿರ ರೂ. ಹಣ ಕೊಡಬೇಕು. ಇಲ್ಲದಿದ್ದರೆ ಎಲ್ಲ ವಿಚಾರ ಪ್ರಚಾರ ಮಾಡುತ್ತೇನೆಂದು ಬೆದರಿಸಿದ್ದಾರೆ. ಅನಂತರ ಮೇ 6 ರಂದು ಅಡ್ಡಹಾಕಿ 25 ಸಾವಿರ ರೂ. ಕೊಡದಿದ್ದರೆ ನಿನ್ನ ಎಲ್ಲ ವ್ಯವಹಾರ ಮಾಹಿತಿ ಹಕ್ಕಿನಲ್ಲಿ ಪಡೆದು, ಬಹಿರಂಗ ಪಡಿಸುವುದಾಗಿ ಬೆದರಿಕೆ ಹಾಕಿರುವುದಾಗಿ ಆನಂದ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *