Breaking News

ಸಿಲಿಕಾನ್ ಸಿಟಿಯಲ್ಲಿ ವಾಹನ ಸವಾರರೇ ಎಚ್ಚರ, ಕಾರ್ ಗ್ಲಾಸ್ ಒಡೆದು ಕನ್ನ ಹಾಕಿದ ಕಳ್ಳರು-

ಬೆಂಗಳೂರು ನಗರದ ರಸ್ತೆಬದಿಗಳಲ್ಲಿ ವಾಹನ ನಿಲ್ಲಿಸುವವರು ಈಗ ಅತೀವ ಜಾಗರೂಕರಾಗಿರಬೇಕಿದೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೊಸ ಮಾದರಿಯ ಕಳವು ಪ್ರಕರಣವೊಂದು ಬೆಳಕಿಗೆ ಬಂದಿದೆ. ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದ ದುಬಾರಿ ಪರಿಕರಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಾರಿನಲ್ಲೇ ಇಟ್ಟು ಮಾಲೀಕರು ಮನೆಗೆ ತೆರಳಿದ್ದರು. ಮರುದಿನ ಮುಂಜಾನೆ ಬಂದು ನೋಡಿದಾಗ, ದುಷ್ಕರ್ಮಿಗಳು ಕಿಟಕಿಯ ಗಾಜು ಪುಡಿಮಾಡಿ ಅದರಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ದೋಚಿರುವುದು ಕಂಡುಬಂದಿದೆ. ಬೆಂಗಳೂರಿನಾದ್ಯಂತ ಬೀಡುಬಿಟ್ಟಿರುವ ಇಂತಹ ಚಾಣಾಕ್ಷ ಕಳ್ಳರು ಸುಸಜ್ಜಿತವಾಗಿ ಕಾರಿನಲ್ಲಿ ಬಂದು ತಮಗೆ ಬೇಕಾದ ವಸ್ತುಗಳನ್ನು ಕ್ಷಣಾರ್ಧದಲ್ಲಿ ಅಪಹರಿಸಿ ಪರಾರಿಯಾಗುತ್ತಿದ್ದಾರೆ. ಸದ್ಯ ಈ ಇಡೀ ಕೃತ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *