ಆನ್‌ಲೈನ್ ಗೇಮಿಂಗ್ ಕಂಪೆನಿಗಳಿಗೆ ಇಂದು ಜಾರಿ ನಿರ್ದೇಶನಾಲಯ ಬಿಗ್ ಶಾಕ್ ನೀಡಿದ್ದು, ಬೆಂಗಳೂರು ಸಹಿತ ದೇಶಾದ್ಯಂತ 16 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು ಮೂಲದ ಗೇಮ್ಸ್‌ಕ್ರಾಫ್ಟ್ ಕಂಪನಿಯು ರಮ್ಮಿ ಕಲ್ಚರ್ ಎಂಬ ಆಪ್ ಮೂಲಕ ಬಳಕೆದಾರರಿಗೆ ವಂಚನೆ ಮಾಡಿದೆ. ಆಟದ ಹೆಸರಿನಲ್ಲಿ ದೊಡ್ಡ ಮಟ್ಟದ ಹಣಕಾಸು ಅಕ್ರಮ ನಡೆಸಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಸಂಬಂಧ ದೆಹಲಿಯಲ್ಲಿ ಎಫ್‌ಐಆರ್ ಗಳು ದಾಖಲಾಗಿದ್ದು, ಇದನ್ನು ಆಧಾರವಾಗಿಟ್ಟುಕೊಂಡು ಇಡಿ ತನಿಖೆ ಕೈಗೆತ್ತಿಕೊಂಡಿದೆ. ಈ ಸಂಬಂಧ ಗೇಮ್ಸ್‌ಕ್ರಾಫ್ಟ್ ಕಚೇರಿಯ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ತಪಾಸಣೆ ನಡೆಸಿದೆ. ಈ ವೇಳೆ ಇಡಿ ಅಧಿಕಾರಿಗಳು ಕಂಪನಿಯ ಬ್ಯಾಂಕ್ ಖಾತೆಗಳು ಮತ್ತು ಕೋಟ್ಯಾಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

