Breaking News

ಸುವೇಂದು ಅಧಿಕಾರಿ ಆಪ್ತನ ಹತ್ಯೆಗೆ ಬಿಹಾರಿ ಶೂಟರ್ಸ್ – 40 ಲಕ್ಷಕ್ಕೆ ಸುಪಾರಿ

ಪಶ್ಚಿಮ ಬಂಗಾಳ :ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕನ ಹತ್ಯೆಗೆ ಸಂಚು ರೂಪಿಸಿರುವ ಆಘಾತಕಾರಿ ವಿಷಯವೊಂದು ತನಿಖೆಯಿಂದ ಬಯಲಾಗಿದೆ. ಈ ಕೊಲೆಗೆ ಬಿಹಾರದಿಂದ ಶಾರ್ಪ್ ಶೂಟರ್‌ಗಳನ್ನು ಕರೆಸಲಾಗಿದ್ದು, ಬರೋಬ್ಬರಿ 40 ಲಕ್ಷ ರೂಪಾಯಿಗಳಿಗೆ ‘ಕಾಂಟ್ರಾಕ್ಟ್’ ನೀಡಲಾಗಿತ್ತು ಎಂಬ ಮಾಹಿತಿ ಪೊಲೀಸರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆಇತ್ತೀಚೆಗೆ ಶಂಕಿತ ಆರೋಪಿಗಳನ್ನು ಬಂಧಿಸಿದ ನಂತರ ಅವರ ಮೊಬೈಲ್ ಕರೆಗಳ ಮಾಹಿತಿ ಹಾಗೂ ಹಣದ ವರ್ಗಾವಣೆಯ ಕುರುಹುಗಳನ್ನು ಆಧರಿಸಿ ಈ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಸ್ಕೆಚ್ ಹಾಕಲಾಗಿದೆಯೇ ಎಂಬ ಬಗ್ಗೆ ತನಿಖೆ ಚುರುಕುಗೊಂಡಿದೆ. ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಈ ಸುದ್ದಿ ತಲ್ಲಣ ಮೂಡಿಸಿದ್ದು, ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಮತ್ತೆ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಶಾರ್ಪ್ ಶೂಟರ್‌ಗಳು ಈಗಾಗಲೇ ಕೋಲ್ಕತ್ತಾ ತಲುಪಿ ದಾಳಿಗೆ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ. ಸಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಸಂಚನ್ನು ವಿಫಲಗೊಳಿಸಿವೆ. ಈ ಪ್ರಕರಣದ ಹಿಂದೆ ಇರುವ ಪ್ರಮುಖ ಸೂತ್ರಧಾರ ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *