Breaking News

ಸಾರ್ವಜನಿಕ ಸ್ಥಳದಲ್ಲಿ ಸೇಂದಿ ಮಾರಾಟ: ವ್ಯಕ್ತಿ ಬಂಧನ

ರಾಯಚೂರು: ಸಾರ್ವಜನಿಕ ಸ್ಥಳದಲ್ಲಿ ಮಾನವ ಸೇವನೆಗೆ ಯೋಗ್ಯವಲ್ಲದ, ವಿಷಪೂರಿತ ಸಿ.ಎಚ್ ಪೌಡರ್ ಮಿಶ್ರಿತ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನೇತಾಜಿ ನಗರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬೋಳಮಾನದೊಡ್ಡಿ ರಸ್ತೆಯ ಕೃಷ್ಣ ದೇವರಾಯ ಕಾಲೊನಿಯಲ್ಲಿ ಖಚಿತ ಮಾಹಿತಿ ಲಭಿಸಿತು. ಕೃಷ್ಣ ದೇವರಾಯ ಪ್ರದೇಶದ ಏಗನೂರು ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಹರಿಜನವಾಡದ ತಾಯಪ್ಪ (52) ಸಿ.ಎಚ್ ಪೌಡರ್ ಮಿಶ್ರಿತ ಸೇಂದಿಯನ್ನು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿ ತಾಯಪ್ಪ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *