ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದ ವಾರಂಟ್ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಸ್ಕೋರ್ಪಿಯಾ ಸತೀಶ್ (35) ಆರೋಪಿ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿ, ನೆಲ್ಯಾಡಿಯ ಸತೀಶ್ ಅಲಿಯಾಸ್ ಸ್ಕೋರ್ಪಿಯಾ ಸತೀಶ್ ತಪ್ಪಿಸಿಕೊಂಡಿದ್ದ. ಈತನನ್ನು ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್, ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಅವರ ತಂಡ, ನೆಲ್ಯಾಡಿಯಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈತನ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ, ವೇಣೂರು ಠಾಣೆಯಲ್ಲಿ ಎರಡು ಪ್ರಕರಣ, ಪುತ್ತೂರು ನಗರ ಠಾಣೆಯಲ್ಲಿ ಒಂದು ಪ್ರಕರಣ, ಧರ್ಮಸ್ಥಳ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

