Breaking News

ಹಾರೋಹಳ್ಳಿ: ವೃದ್ಧೆ ಅಡ್ಡಗಟ್ಟಿ ಸರಗಳ್ಳತನ, ಇಬ್ಬರ ಸೆರೆ

ಹಾರೋಹಳ್ಳಿ: ನಾಲ್ಕು ದಿನಗಳ ಹಿಂದೆ ಹಾರೋಹಳ್ಳಿ ಪಟ್ಟಣದಲ್ಲಿ ನಡೆದಿದ್ದ ವೃದ್ಧೆಯ ಚಿನ್ನದ ಮಾಂಗಲ್ಯಸರ ಕಳ್ಳತನ ಮತ್ತು ಆನೇಕಲ್‌ನಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳ್ಳತನದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕುವೆಂಪು ನಗರದ ಆಟೊ ಚಾಲಕ ಲೋಕೇಶ(41), ಆನೇಕಲ್ ತಾಲ್ಲೂಕು ಮಟ್ಟನಹಳ್ಳಿಯ ಲಾರಿ ಚಾಲಕ ರಮೇಶ್ ವಿ.(43) ಬಂಧಿತರು. ಲಕ್ಷ್ಮಮ್ಮ ಅವರನ್ನು ಅಡ್ಡಗಟ್ಟಿದ ಬೈಕ್‌ನಲ್ಲಿದ್ದ ಅಪರಿಚಿತರಿಬ್ಬರು, ಅವರ ಚಿನ್ನದ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತರಿಂದ ಸುಮಾರು ₹4 ಲಕ್ಷ ಮೌಲ್ಯದ 26 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕ್‌ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಈ ಬೈಕ್‌ ಅನ್ನು ಕೆಲವು ದಿನಗಳ ಹಿಂದೆ ಆನೇಕಲ್‌ನಲ್ಲಿ ಕಳ್ಳತನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *