ಶ್ರೀರಂಗಪಟ್ಟಣ: ತಾಲ್ಲೂಕಿನ ನಗುವನಹಳ್ಳಿ ಗ್ರಾಮದ ವಿಜಯಕಮಾರ್ ಅವರ ಮನೆಯ ಬಾಗಿಲು ಮುರಿದು 280 ಗ್ರಾಂ ಚಿನ್ನಾಭರಣ ಹಾಗೂ ₹3.5ಲಕ್ಷ ನಗದು ಕಳವು ಮಾಡಿರುವ ಪ್ರರಕಣ ಬುಧವಾರ ತಡರಾತ್ರಿ ನಡೆದಿದೆ. ವಿಜಯಕಮಾರ್ ಕುಟುಂಬ ಸದಸ್ಯರು ಕಾರ್ಯನಿಮಿತ್ತ ಬೇರೆ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆದಿದ್ದು, ಗುರುವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ವಿಜಯಕುಮಾರ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಸಿಪಿಐ ಆನಂದಕುಮಾರ್ ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

