Breaking News

ಗೊಬ್ಬರ ತುಂಬಿದ್ದ ಲಾರಿ-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ

ತುಮಕೂರು: ಗೊಬ್ಬರ ತುಂಬಿದ್ದ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ದುರಂತ ಸಂಭವಿಸಿದೆ. ಗೊಬ್ಬರ ತುಂಬಿದ್ದ ಲಾರಿ ಹಾಗೂ ಆಲ್ಟೋ ಕಾರಿನ ನಡುವೆ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಕಾರು ಛಿದ್ರವಾಗಿದೆ. ಕಾರಿನ ಚಾಲಕ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಕುಮಾರಸ್ವಾಮಿ, ಗಾಯತ್ರಿ ಸೇರಿದಂತೆ ಮಂಡ್ಯ ಮೂಲದ ನಾಲ್ವರು ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *